ಉಡುಪಿ :ಉಡುಪಿಗೆ ಆಗಮಿಸಿ ಭರ್ಜರಿ ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಕೃಷ್ಣಮಠಕ್ಕೆ ಭೇಟಿ ನೀಡಿ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದರು. ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಸುವರ್ಣ ತೀರ್ಥ ಮಂಟಪ ಉದ್ಘಾಟನೆಯ ಫಲಕ ಅನಾವರಣ ಮಾಡಿದ ಪ್ರಧಾನಿ ನಂತರ, ಕೋಟಿ ಗೀತಾ ಲೇಖನ ಯಜ್ಞ ದೀಕ್ಷಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

