ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ನವೆಂಬರ್ ತಿಂಗಳಿನಲ್ಲಿ ಜಯಪುರದಲ್ಲಿ ಆಯೋಜಿಸಿದ ರಾಷ್ಟ್ರಮಟ್ಟದ ವಿಜ್ಞಾನ ಮೇಳ ಸ್ಪರ್ಧೆಯಲ್ಲಿ ಅಮೃತ ಭಾರತಿ ವಿದ್ಯಾಲಯ ಹೈಸ್ಕೂಲ್ ವಿಭಾಗದ ಹತ್ತನೇ ತರಗತಿ ವಿದ್ಯಾರ್ಥಿ ಪ್ರೀತಮ್ ದ್ವಿತೀಯ ಬಹುಮಾನವನ್ನು ಪಡೆದು ಸಂಸ್ಥೆಗೆ , ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾನೆ. ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜಿಸಿದ ವಿಜ್ಞಾನ ಮೇಳ ವೇದಗಣಿತ ಗಣಿತ ಸಂಸ್ಕೃತಿ ಜ್ಞಾನ ಮಹೋತ್ಸವ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಸೈನ್ಸ್ ಮಾಡೆಲ್ ಬೆಸ್ಡ್ ಆನ್ ಸೆನ್ಸರ್ ವಿಷಯದಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಮಂಗಳೂರು ಶಾರದಾ ವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಅಲ್ಲಿಯೇ ನಡೆದ ವಿದ್ಯಾಭಾರತಿ ಕ್ಷೇತ್ರ ಮಟ್ಟದ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದುಅಖಿಲ ಭಾರತೀಯ ವಿದ್ಯಾಭಾರತಿ ರಾಷ್ಟ್ರಮಟ್ಟದಲ್ಲಿ ಆಯೋಜಿಸಿದ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ .ಇವರಿಗೆ ಟ್ರಸ್ಟ್ ಪರವಾಗಿ ಸಂಸ್ಥೆಯ ಪರವಾಗಿ ಅಭಿನಂದನೆಯನ್ನು ಸಲ್ಲಿಸುತ್ತಿದ್ದೇವೆ ಎಂದು ಪ್ರಕಟಣೆಗೆ ತಿಳಿಸಿದ್ದಾರೆ.