ಉಡುಪಿ: ಬೈಕ್ ಗೆ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಂಬಾಗಿಲು ಜಂಕ್ಷನ್ ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಕುಂದಾಪುರದಿಂದ ಉಡುಪಿಯ ಕಡೆಗೆ ಸಂಚರಿಸುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಸವಾರನನ್ನು
ಉಡುಪಿ ಪುತ್ತೂರಿನ ಸುಬ್ರಹ್ಮಣ್ಯ ನಗರದ ರವಿ ಪೂಜಾರಿ (44) ಎಂದು ಗುರುತಿಸಲಾಗಿದೆ. ಉಡುಪಿ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.