ಸತತ ಎರಡನೇ ಬಾರಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್‌ಗೆ ಜಿಲ್ಲಾ ಪ್ರಶಸ್ತಿ

0
107

ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ 2024 25 ನೇ ಸಾಲಿನ ಸಾಧನೆಯನ್ನು ಮತ್ತು ಕಾರ್ಯ ವೈಖರಿಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರ ಸಹಕಾರಿ ಬ್ಯಾಂಕ್ ಇವರು “ವಿಶಿಷ್ಟ ಸಾಧನಾ ಪ್ರಶಸ್ತಿಯನ್ನು” ಇಂದು ಮಂಗಳೂರಿನ ಕೇಂದ್ರ ಕಚೇರಿಯಲ್ಲಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರನ್ನು ಗೌರವಿಸುವ ಮೂಲಕ ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರು ಪ್ರಶಸ್ತಿ ಪ್ರಧಾನ ಮಾಡಿದರು.

2024 25 ನೇ ಸಾಲಿನಲ್ಲಿ 351 ಕೋಟಿ ರೂಪಾಯಿಗಳ ವಹಿವಾಟು, ಶೇಕಡ 98.5 ಸಾಲ ವಸೂಲಾತಿ 30 ಕೋಟಿ ನಿರಕು ಠೇವಣಿ ಹೊಂದಿತ್ತು ಒಟ್ಟು 20 ಸಿಬ್ಬಂದಿಗಳನ್ನು ಹೊಂದಿರುವ ಈ ಸೊಸೈಟಿಯು ಈ ಬಾರಿ ಶೇಕಡಾ 8ರ ದರದಲ್ಲಿ ಪಾಲು ಮುನಾಪೆಯನ್ನು ಸದಸ್ಯರಿಗೆ ಹಂಚಿದ್ದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.
ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಎಚ್ ವಸಂತ ಬರ್ನಾಡ್ ಮುಖ್ಯ ಕಾರ್ಯನಿರ್ಧಿಕಾರಿ ಸುದರ್ಶನ್ ಹಾಗೂ ನಿರ್ದೇಶಕರಾದ ಉಮಾನಾಥ ಜೆ ಶೆಟ್ಟಿಗಾರ್ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ ನಿರ್ದೇಶಕರುಗಳಾದ ಡಾ ದೇವಿಪ್ರಸಾದ್ ಶೆಟ್ಟಿ ಮೋನಪ್ಪ ಶೆಟ್ಟಿ ಎಕ್ಕಾರು, ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಇಂದ್ರಾಲಿ ಜಯಕರ್ ಶೆಟ್ಟಿ ಮೊದಲಾದವರು ಇದ್ದರು.

LEAVE A REPLY

Please enter your comment!
Please enter your name here