Sunday, July 14, 2024
Homeರಾಷ್ಟ್ರೀಯಸಂಸತ್ತಿನಲ್ಲಿ ಕನ್ನಡದಲ್ಲಿ ಸಂವಿಧಾನದ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಜಾರಕಿಹೊಳಿ

ಸಂಸತ್ತಿನಲ್ಲಿ ಕನ್ನಡದಲ್ಲಿ ಸಂವಿಧಾನದ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಜಾರಕಿಹೊಳಿ

ನವದೆಹಲಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿರುವ ಕು. ಪ್ರಿಯಾಂಕಾ ಜಾರಕಿಹೊಳಿ ಇಂದು ನೂತನ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಲೋಕಸಭೆಯ ಹಂಗಾಮಿ ಸಭಾಧ್ಯಕ್ಷ ಭರ್ತೃಹರಿ ಮಹತಾಬ್‌ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಿಯಾಂಕಾ ಜಾರಕಿಹೊಳಿ ಸಂವಿಧಾನದ ಹೆಸರಿನಲ್ಲಿ ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದರು.
ಅತ್ಯಂತ ಕಿರಿಯ ವಯಸ್ಸಿನಲ್ಲಿ ಸಂಸದರಾಗುವ ಅವಕಾಶ ಸಿಕ್ಕಿದ್ದಕ್ಕೆ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ತಮ್ಮ ಆಯ್ಕೆಗೆ ಸಹಕರಿಸಿದ ಎಲ್ಲಾ ಮುಖಂಡರಿಗೆ ಅವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಚಿಕ್ಕೋಡಿ ಕ್ಷೇತ್ರದ ಸಮಸ್ಯೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular