ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಯುಗಾದಿ ಹಬ್ಬದ ಪ್ರಯುಕ್ತ ಅವರವರ ಮನೆಯಂಗಳದಲ್ಲಿ ಉಚಿತ ರಂಗೋಲಿ ಸ್ಪರ್ಧೆ ಹಮ್ಮಿಕೊಂಡಿದ್ದು ಮಾರ್ಚ್ 29 ರಂದು ಭಾನುವಾರ ಸಂಜೆ 4 ಗಂಟೆಗೆ ಕಲಾಕುಂಚ ಕಛೇರಿ ಸಭಾಂಗಣದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಅಭಿನಂದನಾ ಪತ್ರ, ಬಹುಮಾನ ವಿತರಿಸಲಾಗುವುದು ಎಂದು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಕಲಾಕುಂಚದ ಅಧ್ಯಕ್ಷರಾದ ವಾಸುದೇವ ಲಕ್ಷö್ಮಣ್ ರಾಯ್ಕರ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾರಂಭದಲ್ಲಿ ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ, ಕಲಾಕುಂಚ ಡಿ.ಸಿ.ಎಂ.ಶಾಖೆಯ ಅಧ್ಯಕ್ಷರಾದ ಶ್ರೀಮತಿ ಶಾರದಮ್ಮ ಶಿವನಪ್ಪ, ಕಲಾಕುಂಚ ವಿದ್ಯಾನಗರ ಶಾಖೆಯ ಅಧ್ಯಕ್ಷರಾದ ರಾಜಶೇಖರ್ ಬೆನ್ನೂರು, ಎಂ.ಸಿ.ಸಿ.ಶಾಖೆಯ ಅಧ್ಯಕ್ಷರಾದ ಶ್ರೀಮತಿ ಪ್ರಭಾ ರವೀಂದ್ರ, ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಅಧ್ಯಕ್ಷರಾದ ಶ್ರೀಮತಿ ಲಲಿತಾ ಕಲ್ಲೇಶ್ ಮುಂತಾದವರು ಉಪಸ್ಥಿತರಿರುತ್ತಾರೆ.
ಮನೆಯಂಗಳದಲ್ಲಿ ಉಚಿತ ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಬಡಾವಣೆಗಳಕಲಾ ಪ್ರತಿಭೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಸಮಾರಂಭ ಯಶಸ್ವಿಗೊಳಿಸಬೇಕಾಗಿ ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.

