ದಿನಾಂಕ 12-12-2025 ರಂದು ಬೆಳಗಾವಿ ಸುರ‍್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ತಿನ ಕಲಾಪದಲ್ಲಿ ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಐವನ್ ಡಿ ಸೋಜಾ ರವರು , ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಪ್ರಾರಂಭದಿಂದ ಇಲ್ಲಿಯವರೆಗೆ ಬಿಡುಗಡೆ ಮಾಡಿದ ಅನುದಾನ ಎಷ್ಟು ? ಎಂಬ ಪ್ರಶ್ನೆಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವರು ಈ ರೀತಿ ಉತ್ತರಿಸಿದ್ದಾರೆ .
ಗೃಹಲಕ್ಷ್ಮೀ ಯೋಜನೆಯ ಪ್ರಾರಂಭದಿಂದ ಈ ವರೆಗೂ ರೂ. 52,416.17 ಕೋಟಿಗಳ ಧನಸಹಾಯವನ್ನು ಫಲಾನುಭವಿಗಳ ಖಾತೆಗೆ DBT ಲಕ ಪಾವತಿಸಲಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆ .


