ಕಾಪು ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​​ಕುಮಾರ್

0
27

ಕಾಪು: ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು ಪುತ್ರಿ ವಂದನಾ ಅವರೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬ್ರಹ್ಮಕಲಶೋತ್ಸವದ ಬಳಿಕ ಎರಡನೇ ಬಾರಿ ಅಶ್ವಿನಿ ಅವರು ಈ ಹೊಸ ಮಾರಿಯಮ್ಮ ಮತ್ತು ಉಚ್ಚಂಗಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅಶ್ವಿನಿ ಪುನೀತ್ ರಾಜ್​ಕುಮಾರ್ ಸಹ ನಿರ್ಮಾಣ ಮಾಡಿರುವ ‘ಎಕ್ಕ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಅದಕ್ಕೆ ಮುಂಚಿತವಾಗಿ ಅಶ್ವಿನಿ ಅವರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಅಶ್ವಿನಿ ಅವರು ದೇವಾಲಯಕ್ಕೆ ಆಗಮಿಸಿದ್ದ ಚಿತ್ರ, ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

LEAVE A REPLY

Please enter your comment!
Please enter your name here