Monday, February 10, 2025
HomeUncategorizedಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭ

ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭ

ಕಾರ್ಕಳ:ಹೊಸ ಶಿಕ್ಷಣ ನೀತಿಗೆ ವಿದ್ಯಾರ್ಥಿಗಳು ಒತ್ತು‌ನೀಡಬೇಕು. ಅದರೊಳಗೆ ವಿದ್ಯಾರ್ಥಿ ಗಳ ಉಜ್ವಲ ಭವಿಷ್ಯವು ಅಡಗಿದೆ ಎಂದು
ನವದೆಹಲಿಯ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿಯ ಅಧ್ಯಕ್ಷರ ಪ್ರೊ. ಅನಿಲ್ ಸಹಸ್ರಬುದ್ದೆ ಹೇಳಿದರು. ಅವರು ಭಾನುವಾರ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ,  ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗದ ವತಿಯಿಂದ ಶ್ರೀ ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ 2014 ನೇ  ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಶಿಕ್ಷಕರು ಎಲ್ಲಾ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ , ಹೊಸ ಶಿಕ್ಷಣ ನೀತಿಯನ್ನು ಅನುಸರಿಸುವ ಮೂಲಕ ಮೌಲ್ಯ ಯುತವಾದ ಶಿಕ್ಷಣ ಒತ್ತು ನೀಡಬೇಕಾಗಿದೆ, ಆಧುನಿಕ ತಂತ್ರಜ್ಞಾನದ ಶಿಕ್ಷಣ ವು ಇಂದಿನ ಅಗತ್ಯತೆ ಯಿದೆ ಎಂದರು.ಉಡುಪಿ ದ.ಕ ಜಿಲ್ಲೆಗಳು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹುಟ್ಟೂರು ಎಂದು ಬಣ್ಣಿಸಿದರು.

ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್ , ಬಲ್ಲಾಳ್  ಮಾತನಾಡಿ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ ಆಧಾರಿತ ಶಿಕ್ಷಣ ಪಡೆಯುವಂತೆ ಕರೆ ನೀಡಿದರು.

ಬಾರಿ ಜೀವಮಾನದ ಸಾಧನೆಗಾಗಿ ಮಂಗಳೂರಿನ ಶಾರದ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ ಬಿ ಪುರಾಣಿಕ್    ಹಾಗೂ  ಶಿಕ್ಷಣ ತಜ್ಞ ಹಾಗೂ ಬರಹಗಾರ ಡಾ. ಶಂಕರ್ ರಾವ್ ,ಕಾಲೇಜು ಆಡಳಿತ ನಿರ್ವಹಣೆಯಲ್ಲಿನ. ಅತ್ಯುತ್ತಮ ಆಡಳಿತ ನಿರ್ವಾಹಕರಾಗಿ ಸಾಧನೆಗಾಗಿ ಮಂಗಳೂರು  ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ   ಡಾ. ಜಗದೀಶ್ ಬಾಳ  ಹಾಗೂ ಹಾಗೂ   ಉಜಿರೆ ಎಸ್ ಡಿ ಎಮ್ ಸ್ವಾಯತ್ತ ಕಾಲೇಜು ಪ್ರಾಂಶುಪಾಲ ಡಾ. ಬಿ.ಎ ಕುಮಾರ ಹೆಗ್ಡೆ, .
ಸಂಶೋಧನ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದ ಶಿಕ್ಷಕರ ಅತ್ಯುತ್ತಮ ಸಂಶೋಧಕ ಪ್ರಶಸ್ತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಪ್ರೊ ವಿಶಾಲಾಕ್ಷಿ
ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗಾಗಿ ಶ್ರೀ ಭುವನೇಂದ್ರ ಕಾಲೇಜು ಪ್ರಾಂಶುಪಾಲಡಾ. ಮಂಜುನಾಥ್ ಕೋಟ್ಯಾನ್,  ಹಾಗೂ
, ಕಾವೇರಿ ಕಾಲೇಜು ವಿರಾಜಪೇಟೆ ನಿವೃತ್ತ ಪ್ರಾಂಶುಪಾಲ ಡಾ. ಆನಂದ ಕಾರ್ಲಾ  ಇವರನ್ನು ಆಯ್ಕೆಇನ್ನು ಅತ್ಯುತ್ತಮ ಗ್ರಂಥಪಾಲಕ ವಿಭಾಗದಲ್ಲಿ  ಮಂಗಳೂರಿನ ಬೆಸೆಂಟ್ ಸಂಧ್ಯಾ ಕಾಲೇಜು ಗ್ರಂಥಪಾಲಕ ಡಾ ವಾಸಪ್ಪ ಗೌಡ, 
ಅತ್ಯುತ್ತಮ ದೈಹಿಕ ಶಿಕ್ಷಣ ಶಿಕ್ಷಕರು ಪ್ರಶಸ್ತಿಗಾಗಿ ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ದೈ.ಶಿಕ್ಷಕ  ಕೆ. ಶಂಕರನಾರಾಯಣ  ಕುಂದಾಪುರ .ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ. ರಘು ಅಕ್ಕಮಂಚಿ ಅವರನ್ನು ಸನ್ಮಾನಿಸಲಾಯಿತು.
.

. ಮುಖ್ಯ ಅತಿಥಿಗಳಾಗಿ ತುಮಕೂರು ಯೂನಿವರ್ಸಿಟಿ ಮಾಜಿ ಸಿಂಡಿಕೇಟ್ ಸದಸ್ಯ ಸುವೃತ್ ಕುಮಾರ್  , ಭುವನೆಂದ್ರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿಎ ಶಿವಾನಂದ ಪೈ ಬೆಂಗಳೂರು ಕೆ ಆರ್ ಎಸ್ ಎಸ್ ಎಸ್ ಅಧ್ಯಕ್ಷ ಡಾ. ಗುರುನಾಥ್ ಬಡಿಗೇರ್, , ಕೆ ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ಪ್ರೊ. ರೋಹಿಣಿ ಕುಮಾರ್ ಕಲಬುರ್ಗಿ,
ರಾಜ್ಯ ಜಂಟಿ ಕಾರ್ಯದರ್ಶಿ , ಡಾ. ಮಾಧವ ಎಂ. ಕೆ ,ಉಡುಪಿ ಅದ್ಯಾಪಕ  ಸಂಘಟನೆ ಯಶವಂತ ಕುದ್ರೋಳಿ, ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಮೋಹನ್ ಪಡಿವಾಳ್
ಮುಂತಾದವರು ಉಪಸ್ಥಿತರಿದ್ದರು .

RELATED ARTICLES
- Advertisment -
Google search engine

Most Popular