ಪಂಚ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

0
87


ಉಡುಪಿ: ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಗೌರವಯುತ ಮತ್ತು ಸ್ವಾವಲಂಬಿ ಬದುಕು ಹೊಂದಬೇಕೆನ್ನುವ ಉದ್ದೇಶದಿಂದ ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಕಳೆದ 2.5 ವರ್ಷಗಳಿಂದ ರಾಜ್ಯವ್ಯಾಪಿ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಯೋಜನೆಗಳ ಪ್ರಗತಿ ಪರಿಶೀಲಿಸಲು ನಮ್ಮ ನಡೆ ವಾರ್ಡ್​ ಕಡೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್​ ಕಾಂಚನ್​ ಹೇಳಿದರು.
ಪುರಭವನದಲ್ಲಿ ಕರ್ನಾಟಕ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಆಯೋಜಿಸಲಾದ ನಮ್ಮ ನಡೆ ವಾರ್ಡ್​ ಕಡೆಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅನ್ನಭಾಗ್ಯ, ಗೃಹಲಕ್ಷಿ$್ಮ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಲಾಭವನ್ನು ಪ್ರತಿಯೊಂದು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಅವರ ಕಾರ್ಯ ಅಭಿನಂದನಾರ್ಹ . ಯೋಜನೆಯ ಲಾಭ ಎಲ್ಲರಿಗೂ ಸಮಾನವಾಗಿ ದೊರೆತಾದ ಸರ್ಕಾರದ ಉದ್ದೇಶ ಈಡೇರಿಕೆಯಾಗುತ್ತದೆ ಎಂದರು. ಸಮಿತಿ ಸದಸ್ಯ ಡಾ. ಸಂತೋಷ್​ ಕುಮಾರ್​ ಬೈರಂಪಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಪಂ ಕಾರ್ಯನಿರ್ವಹಣಾಧಿಕಾರಿ ವಿಜಯಾ, ಉಡುಪಿ ತಾಲೂಕು ಉಪತಹಶೀಲ್ದಾರ್​ ಐರಿನ್​ ನೊರೊನ್ಹಾ, ಅನುಷ್ಠಾನ ಸಮಿತಿಯ ಸದಸ್ಯರಾದ ಅರ್ಚನಾ ದೇವಾಡಿಗ, ದಿನೇಶ್​ ಜತ್ತನ್ನ ಮತ್ತಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here