Monday, July 15, 2024
Homeಉಡುಪಿಜೂನ್1 ರಿಂದ ಜುಲೈ 31ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ: ರಾಜ್ಯ ಸರ್ಕಾರ ಆದೇಶ

ಜೂನ್1 ರಿಂದ ಜುಲೈ 31ರ ವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ: ರಾಜ್ಯ ಸರ್ಕಾರ ಆದೇಶ

ಉಡುಪಿ : ಪ್ರಸಕ್ತ ಸಾಲಿನ ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಆದೇಶವನ್ನು ಉಲ್ಲಂಘಿಸಿದರೆ ದಂಡ:
ಮೀನುಗಾರಿಕೆ ನಿಷೇಧಿಸಿದ ಸರಕಾರಿ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ.

ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಪಾಲಿಸಿ, ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular