ತುಳು ಭಾಷೆ ಸಂಸ್ಕೃತಿಯ ಪ್ರೋತ್ಸಾಹಕ – ಡಾ. ವಿನಯ ಹೆಗ್ಡೆ

0
62

ಮಂಗಳೂರು : ನಿಟ್ಟೆ ಸಂಸ್ಥೆಗಳ ಅಧ್ಯಕ್ಷ ಡಾ. ವಿನಯ ಹೆಗ್ಡೆ ಅವರ ನಿಧನಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ. ವಿನಯ ಹೆಗ್ಡೆ ಅವರು ತುಳು ಭಾಷೆ ಹಾಗೂ ಸಂಸ್ಕೃತಿಯ ಬಹುದೊಡ್ಡ ಪ್ರೋತ್ಸಾಹಕರಾಗಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅನೇಕ ಯೋಜನೆ, ಕಾರ್ಯಕ್ರಮಗಳಿಗೆ ನಿರಂತರವಾಗಿ ಬೆಂಬಲ ಹಾಗೂ ಪ್ರೋತ್ಸಾಹ ನೀಡಿದ್ದರು. ಜಿಲ್ಲೆ ಹಾಗೂ ಹೊರಜಿಲ್ಲೆಯ ವಿವಿಧ ತುಳು ಸಂಘ, ಸಂಸ್ಥೆಗಳಿಗೆ ಎಲ್ಲಾ ರೀತಿಯ ಪ್ರೋತ್ಸಾಹ ಸಹಕಾರವನ್ನು ನಿರಂತರವಾಗಿ ನೀಡಿದವರು.

ನಿಟ್ಟೆ ವೈದ್ಯಕೀಯ ಸಂಸ್ಥೆಯಲ್ಲಿ ತುಳು ಸಂಶೋಧನಾ ಕೇಂದ್ರಗಳನ್ನು ಆರಂಭಿಸಿ, ಆ ಮೂಲಕ ತುಳು ಭಾಷೆ ಹಾಗೂ ಸಂಸ್ಕ್ರತಿಯ ಬೆಳವಣಿಗೆಗೆ ಪ್ರೋತ್ಸಾಹ ನೀಡಿರುವುದು ತುಳು ಬೆಳವಣಿಗೆಯ ನಿಟ್ಟಿನಲ್ಲಿ ಅನನ್ಯ ಸೇವೆ ಎಂದು ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಸಂತಾಪ ಸಂದೇಶದಲ್ಲಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here