ಧಾರವಾಡ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ತಂದೆ ಮತ್ತು ಮಲತಾಯಿಯನ್ನು ಹತ್ಯೆಗೈದ ಘಟನೆ ಧಾರವಾಡ ಜಿಲ್ಲೆಯ ಕುಸುಗಲ್ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಅಶೋಕಪ್ಪ ಕೊಬ್ಬಣ್ಣನವರ್ ಮತ್ತು ಅವರ ಪತ್ನಿ ಶಾರದಮ್ಮ ಎಂದು ಗುರುತಿಸಲಾಗಿದೆ.
ಆರೋಪಿ ಗಂಗಾಧರಪ್ಪ ತಮ್ಮ ಒಡೆತನದ 2 ಎಕರೆ ಆಸ್ತಿಗಾಗಿ ತಂದೆಯೊಂದಿಗೆ ಜಗಳವಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮದ್ಯ ವ್ಯಸನಿಯಾಗಿದ್ದ ಆತ ದಿನನಿತ್ಯ ತನ್ನ ಕುಟುಂಬದೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.
ಶುಕ್ರವಾರ ಮಧ್ಯಾಹ್ನ ಕುಡಿದು ಮನೆಗೆ ಬಂದಿದ್ದು, ಜಗಳ ಆರಂಭಿಸಿದ್ದು, ಆತನ ಬೇಡಿಕೆಗೆ ಪೋಷಕರು ಒಪ್ಪದಿದ್ದಾಗ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.