ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾದ ಬೂತ್ ಕಡೆಗೆ ಸಮೃದ್ಧ ನಡಿಗೆ ಎನ್ನುವ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು ಇಂದು ಅಭಿಯಾಣದ ಮೂಲಕ ಬೈಂದೂರು ಕ್ಷೇತ್ರದ 200 ಬೂತ್ ಗಳನ್ನು ಕಾರ್ಯಕರ್ತರು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಪಟ್ಟಕ್ಕೆ ಏರಿಸುವ ಸಂಕಲ್ಪ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷ ಮತಗಳ ಲೀಡ್ ಒದಗಿಸುವ ಸಂಕಲ್ಪದೊಂದಿಗೆ ಬೂತ್ ಕಡೆಗೆ ಸಮೃದ್ಧ ನಡಿಗೆ ಅಭಿಯಾನ ಹಮ್ಮಿಕೊಂಡಿದ್ದು, ಅಭಿಯಾನ ಸಮಾರೋಪದತ್ತ ಯಶಸ್ವಿಯಾಗಿ ಸಾಗುತ್ತಿದೆ.
ನಿರಂತರ 18 ದಿನಗಳ ಕಾಲ ನಡೆಯಲಿರುವ ಈ ಅಭಿಯಾನದಲ್ಲಿ ಕಾರ್ಯಕರ್ತರೊಂದಿಗೆ ಶಾಸಕ ಗಂಟಿಹೊಳೆ ಅವರು ಕೂಡಾ ಹೆಜ್ಜೆ ಹಾಕುತ್ತಿರುವುದು ವಿಶೇಷ. ಅಭಿಯಾನದ ಹಾದಿಯಲ್ಲಿ ಕಾರ್ಯಕರ್ತರು ಮೋದಿ ಸರ್ಕಾರದ ಸಾಧನೆಗಳನ್ನು ಮತ್ತು ರಾಘವೇಂದ್ರ ಅವರು ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ತಲುಪಿಸಿದ್ದಾರೆ.
ಸದರಿ ದೇವಸ್ಥಾನದ ಎಲ್ಲಾ ಭಕ್ತಾಧಿಗಳು ರಥೋತ್ಸವದ ಕಾರ‍್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ರಥೋತ್ಸವವನ್ನು ಅದ್ದೂರಿಯಾಗಿ ಯಶಸ್ವಿಗೊಳಿಸಬೇಕೆಂದು ಟ್ರಸ್ಟ್ನ ಅಧ್ಯಕ್ಷರಾದ ಅಣಬೇರು ರಾಜಣ್ಣನವರು ತಿಳಿಸಿರುತ್ತಾರೆ.