ಮೂಡುಬಿದಿರೆ: ಪೇಟೆಯ ಕಟ್ಟವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಿಳೆಯೊಬ್ಬರನ್ನು ರಕ್ಷಿಸಿದ್ದಾರೆ.
ಮಾರ್ಪಾಡಿ ಗ್ರಾಮದ ಆಳ್ವಾಸ್ ಆಸ್ಪತ್ರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಮಹಡಿ ಕಟ್ಟಡದಲ್ಲಿರುವ ರೂಂ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದಾಗಿ ದೊರೆತ ಮಾಹಿತಿಯಂತೆ ಪೊಲೀಸ್ ಇನ್ಸೆಕ್ಟರ್ ಸಂದೇಶ್ ಪಿ.ಜಿ ನೇತೃತ್ವದ ಪೊಲೀಸ್ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೂಡುಬಿದಿರೆ ಸ್ವರಾಜ್ಯ ಮೈದಾನ ನಿವಾಸಿ ರಾಜೇಶ್ ಬೋವಿ ಹಾಗೂ ಬೆಳ್ತಂಗಡಿ ತಾಲೂಕಿನ ನಾರಾವಿ ಭರತ್ ಜೈನ್ ಬಂಧಿತ ಆರೋಪಿಗಳು. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.