Sunday, July 14, 2024
Homeಉಡುಪಿಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್...

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ

ಉಡುಪಿ:ಗ್ಯಾರಂಟಿಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ನಿರ್ಧಾರ ಖಂಡಿಸಿ ಇಂದು ದಿನಾಂಕ 17-06-2024 ರಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿ ಬಳಿ ಹಮ್ಮಿಕೊಳ್ಳಲಾದ ಬೃಹತ್ ಪ್ರತಿಭಟನೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ. ಸುನಿಲ್ ಕುಮಾರ್, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular