Saturday, December 14, 2024
HomeUncategorizedವಕ್ಸ್‌ ಬೋರ್ಡ್ ನೋಟಿಸ್‌ ನೀಡಿರುವುದರ ವಿರುದ್ಧ ಬಿಜೆಪಿ ಕಾರ್ಕಳ ಪ್ರತಿಭಟನೆ

ವಕ್ಸ್‌ ಬೋರ್ಡ್ ನೋಟಿಸ್‌ ನೀಡಿರುವುದರ ವಿರುದ್ಧ ಬಿಜೆಪಿ ಕಾರ್ಕಳ ಪ್ರತಿಭಟನೆ

ಕಾರ್ಕಳ: ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲದಿಂದ ಕಾರ್ಕಳ ಮತ್ತು ಹೆಬ್ರಿ ತಾಲೂಕಿನಲ್ಲಿ ದಿನಾಂಕ 05.11.2024 ಮಂಗಳವಾರದಂದು ರೈತರ ಜಮೀನಿಗೆ ವಕ್ಸ್ ಬೋರ್ಡ್ ನೋಟಿಸ್ ನೀಡಿರುವುದರ ವಿರುದ್ಧ ಪ್ರತಿಭಟನೆ ಆಯೋಜಿಸಲಾಗಿದೆ. ಪ್ರತಿಭಟನೆ ಕುರಿತು ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಕಳ ಮತ್ತು ಹೆಬ್ರಿಯಲ್ಲಿ ನವೆಂಬರ್ 05 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದ್ದು, ಕಾರ್ಕಳದಲ್ಲಿ ಬೆಳಿಗ್ಗೆ 10 ಗಂಟೆಗೆ ಬಂಡಿಮಠ ಬಸ್ ನಿಲ್ದಾಣದಿಂದ ತಾಲೂಕು ಕಚೇರಿಯವರೆಗೆ ಮೆರವಣಿಗೆ ನಡೆಸಿ ವಕ್ಸ್ ಬೋರ್ಡ್‌ನಲ್ಲಾಗಿರುವ ದಾಖಲೆಗಳ ತಿದ್ದುಪಡಿ ವ್ಯವಹಾರಗಳ ಕುರಿತಿ ಸಿಬಿಐ ಮತ್ತು ಇ.ಡಿ. ತನಿಖೆ ನಡೆಸಲು ಒತ್ತಾಯಿಸಿ ತಹಸೀಲ್ದಾರ್‌ಗೆ ಮನವಿ ಅರ್ಪಿಸಲಾಗುವುದು. ನಂತರ ತಾಲೂಕಿನ ರೈತರು ಪಹಣಿ ನೀಡುವ ಕಿಟಿಕಿ ಎದುರು ಸರತಿ ಸಾಲಲ್ಲಿ ನಿಂತು ತಮ್ಮ ಜಮೀನಿ ಪಹಣಿ ಪರಿಶೀಲನೆ ನಡೆಸಲಿದ್ದಾರೆ. ಹೆಬ್ರಿ ತಾಲೂಕಿನಲ್ಲೂ ಇದೇ ಮಾದರಿಯಲ್ಲಿ ಮಧ್ಯಾಹ್ನ 3.30ಕ್ಕೆ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ತಾಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮಂಡಲ ಅಧ್ಯಕ್ಷರಾದ ನವೀನ್ ನಾಯಕ್ ಮನವಿ ಮಾಡಿದ್ದಾರೆ. ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಮಹಾವೀರ ಹೆಗ್ಡೆ ಮತ್ತು ಜಯರಾಮ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಕಾರ್ಯದರ್ಶಿ ಉದಯ ಎಸ್ ಕೋಟ್ಯಾನ್ ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular