ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದುರಸ್ಥಿ ಮಾಡದೇ ಅನೇಕ ಅಮಾಯಕರ ಜೀವಗಳು ಬಲಿಯಾಗುತ್ತಿದ್ದು, ರಸ್ತೆಗಳು ಹೊಂಡಮಯವಾಗಿದ್ದರೂ ಯಾವುದೇ ಕಾಮಗಾರಿ ನಡೆಸದೇ ತಾತ್ಕಾಲಿಕವಾಗಿಯೂ ರಸ್ತೆಯನ್ನು ರಿಪೇರಿ ಮಾಡದೇ ಹೊಂಡಮಯವಾಗಿದೆ.
ರಾಷ್ಟ್ರೀಯ ಹೆದ್ದಾರಿಯನ್ನು ಅವೈವಿಜ್ಞಾನಿಕವಾಗಿ ನಿರ‍್ಮಾಣ ಮಾಡಿ ಚರಂಡಿಯಲ್ಲಿ ಹರಿಯಬೇಕಾದ ನೀರು ರಸ್ತೆಯಲ್ಲಿ ಹರಿದು ಅನೇಕ ಅಮಾಯಕರ ಜೀವಗಳು ಬಲಿಯಾಗುತ್ತಿದ್ದು, ಸರಣಿ ಅಪಘಾತಗಳು ನಡೆಯುತ್ತಿದ್ದು, ಇದಕ್ಕೆಲ್ಲವೂ ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಜವಾಬ್ದಾರಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕ್ಕದ್ದಮೆ ಹೂಡಬೇಕು ಮತ್ತು ಅಪಘಾತದಲ್ಲಿ ಬಲಿಯಾದವರಿಗೆ ಕೂಡಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಪರಿಹಾರ ಒದಗಿಸಿ ಕೊಡಬೇಕು ಎಂದು ನಂತೂರು ಜಂಕ್ಷನ್ ಪ್ರಾಧಿಕಾರದ ಕಛೇರಿ ಎದುರುಗಡೆ ಪ್ರತಿಭಟನೆ ನಡೆಯಲಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು ವಿಧಾನ ಪರಿಷತ್ ಶಾಸಕರಾದ ಐವನ್ ಡಿʼಸೋಜಾರವರು ತಿಳಿಸಿದ್ದಾರೆ.
ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಸ್ತೆ ದುರಸ್ಥಿಗಾಗಿ ಒತ್ತಾಯಿಸೋಣ ಎಂದು ಐವನ್ ಡಿʼಸೋಜಾರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
