ರಾಜ್ಯ ಹೆದ್ದಾರಿಯ ಹದಗೆಟ್ಟ ರಸ್ತೆಗಳ ವಿರುದ್ಧ ಬಜ್ಪೆಯಲ್ಲಿ ಪ್ರತಿಭಟನೆ

0
1


ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿಗಳಲ್ಲಿ ಹೊಂಡಗುಂಡಿಗಳಿಂದ ಕೂಡಿದ ಹದಗೆಟ್ಟ ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸಿ ಡಾಮರೀಕರಣ ಮಾಡಬೇಕೆಂದು ಆಗ್ರಹಿಸಿ, ಇಂದು ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯ ವತಿಯಿಂದ ಬಜ್ಪೆ ಚೆಕ್‌ಪೋಸ್ಟ್ ಬಳಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಸಿರಾಜ್ ಬಜ್ಪೆ ಇಂದು ನಾವು ಶಾಂತಿಯುತವಾಗಿ ಕೇವಲ ಬಜ್ಪೆ ಭಾಗದ ಸಂಘ-ಸಂಸ್ಥೆಗಳ ಪದಾಧಿಕಾರಿಗಳನ್ನು ಮಾತ್ರ ಪ್ರತಿಭಟನೆಗೆ ಆಹ್ವಾನಿಸಿದ್ದೇವೆ. ಹದಗೆಟ್ಟಿರುವ ರಾಜ್ಯ ಹೆದ್ದಾರಿಯ ಹೊಂಡಗುಂಡಿಗಳನ್ನು ಕೂಡಲೇ ಮುಚ್ಚಿ, ಸಮರ್ಪಕವಾಗಿ ಡಾಮರೀಕರಣ ಮಾಡಬೇಕು. ಮತ್ತೆ ಕೇವಲ ತೇಪೆ ಹಾಕುವ ಮೂಲಕ ಕಾಮಗಾರಿ ಮುಗಿಸುವ ಪ್ರಯತ್ನ ಮುಂದುವರಿಸಿದರೆ, ಮುಂದಿನ ದಿನಗಳಲ್ಲಿ ಬಜ್ಪೆಯ ಸಮಸ್ತ ನಾಗರಿಕ ಬಂಧುಗಳನ್ನು ಒಗ್ಗೂಡಿಸಿ ರಾಜ್ಯ ಹೆದ್ದಾರಿ ಬಂದ್ ಮಾಡುವ ಮೂಲಕ ಬೃಹತ್ ಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು. ಕೊನೆಗೆ ಲೋಕೋಪಯೋಗಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಮನವಿ ನೀಡಲಾಯಿತು .
ಪ್ರತಿಭಟನೆಯಲ್ಲಿ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆಯ ಉಪಾಧ್ಯಕ್ಷರಾದ ಇಸ್ಮಾಯಿಲ್ ಇಂಜಿನಿಯರ್, ಕಾನೂನು ಸಲಹೆಗಾರರಾದ ಮಾಧವ ಅಮೀನ್, ದಲಿತ ಸಂಘದ ಮುಖಂಡರು, ಬಜ್ಪೆ ಪಟ್ಟಣ ಪಂಚಾಯತ್ ಕೌನ್ಸಿಲರ್‌ಗಳು ,ಸದಸ್ಯರು, ವೇದಿಕೆಯ ಪ್ರಧಾನ ಕಾರ್ಯದರ್ಶಿ ನಿಸಾರ್ ಕರಾವಳಿ, ಬಜ್ಪೆ ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರು, ಮಳವೂರು ಗ್ರಾಮ ಪಂ. ಮಾಜಿ ಸದಸ್ಯರುಗಳು, SDPI ಮುಖಂಡರು ಹಾಗೂ ಗ್ರಾ ಪಂ ಮಾಜಿ ಸದಸ್ಯರುಗಳು, ಕಂದಾವರ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯರುಗಳು ,ಸಾಮಾಜಿಕ ಕಾರ್ಯಕರ್ತರು, ವೇದಿಕೆಯ ಉಪಾಧ್ಯಕ್ಷರು ಹಾಗೂ ದಲಿತ ಸಂಘದ ನಾಯಕರು, ಹಲವು ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ರಿಕ್ಷಾ ಚಾಲಕ ಮಾಲಕ ಸಂಘದ ಪದಾಧಿಕಾರಿಗಳೂ ,ಹಾಗೂ ನಾಗರಿಕ ಬಂಧುಗಳು ಭಾಗವಹಿಸಿ ಪ್ರತಿಭಟನೆಗೆ ಧ್ವನಿಗೂಡಿಸಿದರು.
.