Sunday, March 23, 2025
Homeಉಡುಪಿಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಎಬಿವಿಪಿಯಿಂದ ಉಡುಪಿಯಲ್ಲಿ ಪ್ರತಿಭಟನೆ

ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಎಬಿವಿಪಿಯಿಂದ ಉಡುಪಿಯಲ್ಲಿ ಪ್ರತಿಭಟನೆ

ಪಶ್ಚಿಮ ಬಂಗಾಳದ ಸಂದೇಶಖಾಲಿಯಲ್ಲಿ ಮಹಿಳೆಯರ ವಿರುದ್ಧ ನಡೆಯುತ್ತಿರುವ ಅಧಿಕಾರ ಪ್ರಾಯೋಜಿತ ಹಾಗೂ ಅಧಿಕಾರ ಬೆಂಬಲಿತ ದೌರ್ಜನ್ಯ ಹಾಗೂ ಶೋಷಣೆ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.

ನಗರ ಕಾರ್ಯದರ್ಶಿ ಶ್ರೀವತ್ಸ ಮಾತನಾಡಿ ಮಮತಾ ಬ್ಯಾನರ್ಜಿ ಟಿಎಂಸಿ ಸರ್ಕಾರದ ಈ ನಡೆ ಖಂಡನೀಯ ಹಾಗೂ ಇದರ ಕುರಿತು ಭಾರತದ ರಾಷ್ಟ್ರಪತಿಯವರು ಕೇಂದ್ರ ತನಿಖಾ ತಂಡದ ಮೂಲಕ ಉನ್ನತ ಮಟ್ಟದ ಪಾರದರ್ಶಕ ತನಿಖೆ ನಡೆಸಿ ಶೋಷಿತ ಮಹಿಳೆಯರಿಗೆ ನ್ಯಾಯ ವದಗಿಸಿಕೊಡಬೇಕು ಮತ್ತು ಮುಂದಿನ ದಿನಗಳಲ್ಲಿ ಇಂತಹ ಜಿಹಾದಿ ಕೃತ್ಯವನ್ನು ವಿವೇಕ, ಬೋಸರ ಬಂಗಾಳದಲ್ಲಿ ನಡೆಯದಂತೆ ತಡೆಯಬೇಕು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕರಾದ ಗಣೇಶ್ ಪೂಜಾರಿ, ತಾಲೂಕು ಸಂಚಾಲಕರಾದ ಅಜಿತ್ ಜೋಗಿ, ನಗರ ಸಹ ಕಾರ್ಯದರ್ಶಿ ಕಾರ್ತಿಕ್ ಮತ್ತು ಭಾವನಾ, ನಗರ ಹೋರಾಟ ಪ್ರಮುಖ್ ಭೂಷಣ್ ಮತ್ತು ಪ್ರಮುಖರಾದ ಸ್ವಸ್ತಿಕ್, ಆದಿತ್ಯ, ಸುಮುಖ್, ದರ್ಶನ್, ಲ್ಯಾರಿ, ಮನು ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular