ವಿಜಯಪುರ: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ನಗರದ ಸಿದ್ಧೇಶ್ವರ ದೇವಸ್ಥಾನದ ಹತ್ತಿರ ವಕ್ಫ್ ಕಾಯ್ದೆ ವಿರೋಧಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ನಮೋ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಸಾರ್ವಜನಿಕರ, ರೈತರ, ಸಂಘ ಸಂಸ್ಥೆಗಳ, ದೇವಸ್ಥಾನಗಳ, ಸರ್ಕಾರಿ ಆಸ್ತಿ, ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಉತಾರೆಯಲ್ಲಿ ನಮೂದಿಸುವುದನ್ನು ಕೈಬಿಡಬೇಕೆಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ.