ಕೊಲ್ಕತ್ತಾ: ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿದ್ದು, ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗವನ್ನು ಪ್ರತಿಭಟನಕಾರರು ಧ್ವಂಸ ಮಾಡಿದ್ದಾರೆ. ಆಸ್ಪತ್ರೆ ಹೊರ ಭಾಗದಲ್ಲಿ ಹೆಚ್ಚಿನ ಜಮಾಯಿಸಿದ್ದು, ಇದನ್ನು ತಡೆಯಲು ಯತ್ನಿಸಿದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ. ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ.
ಮಹಿಳೆಯರ ಗುಂಪು ಆಸ್ಪತ್ರೆಯ ಹೊರ ಭಾಗದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿತ್ತು. ಆದರೆ ಬುಧವಾರ ತಡರಾತ್ರಿ ಯುವಕರ ಗುಂಪೊಂದು ಏಕಾಏಕಿ ಆಸ್ಪತ್ರೆಯ ಒಳಗೆ ನುಗ್ಗಿ ಆಸ್ಪತ್ರೆಯ ತುರ್ತು ಘಟಕವನ್ನು ಪುಡಿಗೈದು ಹೊರಬಂದಿದೆ. ಈ ವೇಲೆ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ. ಆಸ್ಪತ್ರೆ ಸುತ್ತಮುತ್ತ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ.