ಡೆಂಗ್ಯೂ ಹಾಗೂ ಕೀಟ ಜನ್ಯ ರೋಗಗಳ ಬಗ್ಗೆ ಜನ ಜಾಗೃತಿ ಅಭಿಯಾನ

0
16

ದ.ಕ ಜಿಲ್ಲಾ ಪಂಚಾಯತ್ , ಬಂಟ್ವಾಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ, ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 27.06.2025 ರಂದು ಡೆಂಗ್ಯೂ ಹಾಗೂ ಕೀಟ ಜನ್ಯ ರೋಗಗಳ ಬಗ್ಗೆ ಜನ ಜಾಗೃತಿ ಅಭಿಯಾನ ನಡೆಯಿತು. ಶಾಲೆಯ ಮುಖ್ಯ ಶಿಕ್ಷಕರಾದ ಹರಿಪ್ರಸಾದ್ ಸ್ವಾಗತಿಸಿದರು. ಬಂಟ್ವಾಳ ನಗರ ವೈದ್ಯಾಧಿಕಾರಿಗಳಾದ ಡಾ. ಅಶ್ವಿನಿ ಇವರು ಡೆಂಗ್ಯೂ ಹಾಗೂ ಕೀಟ ಜನ್ಯ ರೋಗಗಳ ಹರಡುವಿಕೆ, ನಿಯಂತ್ರಣ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು. ರಾಕೇಶ್ ನಿರೀಕ್ಷಣಾಧಿಕಾರಿ, ಸಂಧಿಕಾ ಸುರಕ್ಷಣಾಧಿಕಾರಿ ಮತ್ತು ಮಂಜುಳಾ, ಆಶಾ ಕಾರ್ಯಕರ್ತೆ, ಹಾಗೂ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಶ್ರೀದೇವಿ ಪಿ ಅಭಿಯಾನದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here