
ಮದ್ಯಮುಕ್ತ ಸಮಾಜ ನಿರ್ಮಾಣಕ್ಕೆ ಜನಜಾಗೃತಿ ಜಾಥಾ ಹಾಗೂ ಗಾಂಧಿ ಸ್ಮೃತಿ ಕಾರ್ಯಕ್ರಮ
ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಉಡುಪಿ ಹಾಗೂ ಕಾಪು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.), ಧರ್ಮಸ್ಥಳ ಮತ್ತು ಜನಜಾಗೃತಿ ವೇದಿಕೆ ಉಡುಪಿ ಹಾಗೂ ಕಾಪು ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಮದ್ಯಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಜನಜಾಗೃತಿ ಜಾಥಾ ಹಾಗೂ ಗಾಂಧಿ ಸ್ಮೃತಿ ಕಾರ್ಯಕ್ರಮವು ಅಕ್ಟೋಬರ್ 3ರಂದು ಬನ್ನಂಜೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಜಾಥಾ ಕಾರ್ಯಕ್ರಮವನ್ನು ಧರ್ಮದರ್ಶಿಗಳಾದ ಡಾ. ಎನ್. ಬಿ. ವಿಜಯ ಬಲ್ಲಾಳ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೆ. ವಿಜಯ ಕೊಡವೂರು, ಸುಂದರ್ ಕಲ್ಮಡಿ, ನವೀನ್ ಅಮೀನ್, ಶಿವಕುಮಾರ್, ಗೀತಾಂಜಲಿ ಸುವರ್ಣ, ಸತ್ಯಾನಂದ ನಾಯಕ್ ಸೇರಿದಂತೆ ಜನಜಾಗೃತಿ ವೇದಿಕೆಯ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ನಂತರ ನಡೆದ ಸಭಾ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ರಾಜ್ಯಾಧ್ಯಕ್ಷರಾದ ದೇವದಾಸ್ ಹೆಬ್ಬಾರ್ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶಿವಕುಮಾರ್, ನವೀನ್ ಅಮೀನ್, ಕೃಷ್ಣ ಶೆಟ್ಟಿ, ಸುಂದರ್ ಕಲ್ಮಡಿ, ಗೋಪಾಲಕೃಷ್ಣ ಶೆಟ್ಟಿ ಸೇರಿದಂತೆ ವಿವಿಧ ವಲಯಗಳ ಅಧ್ಯಕ್ಷರು, ಸದಸ್ಯರು ಹಾಗೂ ನವಜೀವನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ತಾಲೂಕು ಯೋಜನಾಧಿಕಾರಿ ಸುರೇಂದ್ರ ನಾಯಕ್ ಅವರು ಸ್ವಾಗತಿಸಿದರು. ಮೇಲ್ವಿಚಾರಕರಾದ ಪ್ರೇಮ ಹಾಗೂ ಬಾಲಚಂದ್ರ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಮದ್ಯಪಾನ ಸೇರಿದಂತೆ ವಿವಿಧ ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಹಾಗೂ ಸುಸ್ಥಿರ ಸಮಾಜ ನಿರ್ಮಾಣ ಮಾಡುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
