ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜನಜಾಗೃತಿ ಕಾರ್ಯಕ್ರಮ
ಉಡುಪಿ : ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಉಡುಪಿ ಹಾಗೂ ಕಾಪು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.), ಧರ್ಮಸ್ಥಳ ಜನಜಾಗೃತಿ ವೇದಿಕೆ ಉಡುಪಿ ಮತ್ತು ಕಾಪು ತಾಲೂಕುಗಳ ಸಂಯುಕ್ತ ಆಶ್ರಯದಲ್ಲಿ ಜನಜಾಗೃತಿ ಜಾಥಾ ಹಾಗೂ ಗಾಂಧಿ ಸ್ಮೃತಿ ಕಾರ್ಯಕ್ರಮ ಅ.3ರಂದು ನಡೆಯಲಿದೆ.
ಬೆಳಗ್ಗೆ 10 ಗಂಟೆಗೆ ಬ್ರಹ್ಮಗಿರಿ ಸರ್ಕಲ್‌ನಿಂದ ಜನಜಾಗೃತಿ ಜಾಥಾ ಆರಂಭಗೊಂಡು ಬನ್ನಂಜೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ತಲುಪಲಿದೆ. ಜಾಥಾ ಕಾರ್ಯಕ್ರಮಕ್ಕೆ ಡಾ. ನಿ.ಬಿ. ವಿಜಯ ಬಲ್ಲಾಳ್ ಚಾಲನೆ ನೀಡಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಭಾಭವನ, ಬನ್ನಂಜೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಎ. ಸುವರ್ಣ ಉದ್ಘಾಟಿಸಲಿದ್ದು, ಉಡುಪಿ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ನವಜೀವನ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಭಿನಂದನೆ ನೆರವೇರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಉಡುಪಿಯ ಮಾಜಿ ಶಾಸಕ ರಘುಪತಿ ಭಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ಟ್ರಸ್ಟಿ ಡಾ. ಪಿ.ವಿ. ಭಂಡಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ಮಹಾಪಾಲ ವೃತ್ತದ ಮಹೇಶ್ ಪ್ರಸಾದ್, ಕಾಪು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸತ್ಯೇಂದ್ರ ಪೈ, ಸಂತೋಷ ವಾಗ್ಲೆ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಗೌರವ ಉಪಸ್ಥಿತರಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಂಘಟನಾ ಅಧ್ಯಕ್ಷ ದೇವದಾಸ್ ಹೆಬ್ಬಾರ್, ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ನವೀನ್ ಅಮೀನ್, ನಿಕಟಪೂರ್ವ ಅಧ್ಯಕ್ಷ ಸತ್ಯಾನಂದ ನಾಯಕ್, ಕಾಪು ತಾಲೂಕು ನಿಕಟಪೂರ್ವ ಅಧ್ಯಕ್ಷ ದಯಾನಂದ ಪೆಜಮಾಡಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಮಾಧವ ಬನ್ನಂಜೆ, ಉಡುಪಿ ತಾಲೂಕು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುಂದರ್ ಜೆ. ಕಲ್ದಾಡಿ, ಕಾಪು ತಾಲೂಕು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರುವರು.
ಕಾರ್ಯಕ್ರಮದ ಅಂಗವಾಗಿ ನವಜೀವನ ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. “ನಡೆಯುವವರಿಗೆ ದಾರಿಯಂತೆ ಜಾರುವವರಿಗೆ ಬೀಳದಂತೆ, ಬಿದ್ದವರನ್ನು ಎತ್ತುವುದೇ ಜನಜಾಗೃತಿ ಕಾಯಕ” ಎಂಬ ಆಶಯದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಮಾಜವನ್ನು ವ್ಯಸನಮುಕ್ತಗೊಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

