ಉಡುಪಿ : ಸಂತೆಕಟ್ಟೆಯ Canara Bank ಎದುರು ಭಾಗದಲ್ಲಿರುವ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಕೆಳಭಾಗದಲ್ಲಿ ಕಸದ ರಾಶಿ ತುಂಬಿಕೊಂಡು ಸಾರ್ವಜನಿಕ ರಸ್ತೆಯವರೆಗೂ ಹರಡಿದ್ದ ಸಮಸ್ಯೆಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಸ್ವಚ್ಛತಾ ಕಾರ್ಯ ನಡೆಸಿರುವುದಕ್ಕೆ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳೆಂಜೆ ಅವರು ನಗರಸಭೆ ಹಾಗೂ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ದೂರವಾಣಿ ಮೂಲಕ ಸಮಸ್ಯೆ ಗಮನಕ್ಕೆ ತಂದಿದ್ದರು. ಸಮಸ್ಯೆಯ ಗಂಭೀರತೆಯನ್ನು ಅರಿತ ಅಧಿಕಾರಿಗಳು ಹಾಗೂ ಸ್ಥಳೀಯ ಮಾಜಿ ನಗರಸಭಾ ಸದಸ್ಯಸಂತೆಕಟ್ಟೆ ಪುತ್ತೂರು ತಕ್ಷಣ ಕ್ರಮ ಕೈಗೊಂಡಿದ್ದಾರೆ.
ಕಸದ ರಾಶಿಯಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗುತ್ತಿದ್ದು, ಪರಿಸರ ಮಾಲಿನ್ಯದ ಆತಂಕವೂ ಹೆಚ್ಚಾಗಿತ್ತು. ಇದನ್ನು ಮನಗಂಡ ನಗರಸಭೆ ಸಿಬ್ಬಂದಿ ಇಂದು ಬೆಳಿಗ್ಗೆ ಸ್ಥಳಕ್ಕೆ ಆಗಮಿಸಿ ಕಸವನ್ನು ಸಂಪೂರ್ಣವಾಗಿ ತೆರವುಗೊಳಿಸಿ ಸ್ವಚ್ಛತಾ ಕಾರ್ಯ ನಡೆಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕರು ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳೆಂಜೆ ಅವರ ಪರಿಸರ ಕಾಳಜಿ ಹಾಗೂ ಮಾನವೀಯ ಸೇವೆಯನ್ನು ಶ್ಲಾಘಿಸಿದರು.
ಸ್ಥಳದಲ್ಲಿ ಶಾಶ್ವತ ನಾಮಫಲಕ ಅಳವಡಿಕೆ ಹಾಗೂ ಸಿಸಿ ಕ್ಯಾಮೆರಾ ವ್ಯವಸ್ಥೆ ಮಾಡಬೇಕು. ಸಾರ್ವಜನಿಕರು ಮತ್ತೆ ಕಸ ಹಾಕದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕಸ ಎಸೆಯುವವರ ವಿರುದ್ಧ ನಗರಸಭೆ ಮತ್ತು ಪಂಚಾಯತ್ ಅಧಿಕಾರಿಗಳು ಕಠಿಣ ಕ್ರಮ ಜರುಗಿಸಬೇಕು ಎಂದು ಸತೀಶ್ ಪೂಜಾರಿ ಆಗ್ರಹಿಸಿದ್ದಾರೆ.
“ನಿನ್ನೆ ಸಮಸ್ಯೆ ವರದಿ ಮಾಡಿದ ತಕ್ಷಣ ಇಂದು ಕಸ ತೆರವುಗೊಳಿಸಿರುವುದು ಶ್ಲಾಘನೀಯ ಕಾರ್ಯ” ಎಂದು ಸಾರ್ವಜನಿಕರ ಪರವಾಗಿ ನಗರಸಭೆ ಅಧಿಕಾರಿಗಳು, ಮೆಸ್ಕಾಂ ಅಧಿಕಾರಿಗಳು ಹಾಗೂ ಸ್ಥಳೀಯ ಮಾಜಿ ನಗರಸಭಾ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅರುಣ್ ಪೂಜಾರಿ ಮಯ್ಯಾಡಿ , ಉಮೇಶ್ ಶೆಟ್ಟಿ ನಡುಮನೆ ,ರೋಶನ್ D’Souza ಸೇರಿದಂತೆ ಹಲವರು ಉಪಸ್ಥಿತರಿದ್ದರು.

