ಬಂದಾರು :ಬಂದಾರು ಗ್ರಾಮ ಮೈರೋಳ್ತಡ್ಕ ಅಂಗನವಾಡಿ ಕೇಂದ್ರ ದಲ್ಲಿ ಪೋಲಿಯೋ ದಿನದ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಂದಾರು ಗ್ರಾಮ ಪಂಚಾಯತ್ ಸದಸ್ಯರಾದ ಅನಿತಾ ಉದಯ ಕುರುಡoಗೆ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ಸಮುದಾಯ ಅರೋಗ್ಯ ಅಧಿಕಾರಿ ಜಗದೀಶ್, ಆಶಾ ಕಾರ್ಯಕರ್ತೆ ರಾಜೀವಿ, ಅಂಗನವಾಡಿ ಕಾರ್ಯಕರ್ತೆಯರಾದ ವಾಣಿ. ವಿ ಮತ್ತು ಚೇತನ, ಸಹಾಯಕಿ ದಯಾಮಣಿ ಹಾಗೂ ಪೋಷಕರು, ಪುಟಾಣಿ ಮಕ್ಕಳು ಉಪಸ್ಥಿತರಿದ್ದರು .

