ಪುನರೂರು : ಜ.3 ರಂದು ಪುನರೂರು ಸಂಭ್ರಮ

0
24

ಪುನರೂರು ಪ್ರತಿಷ್ಟಾನ (ರಿ) ಅರ್ಪಿಸುವ ಪುನರೂರು ವರುಷದ ಹರುಷ ಸಂಭ್ರಮವು ಜ.3 ರಂದು ಪುನರೂರಿನ ಭಾರತಮಾತಾ ಮೈದಾನದ “ಪುನರೂರು ಮಂಟಪದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.

ಈ ಕರ್ಯಕ್ರಮವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ಸತ್ಯನಾರಾಯಣ ನೂರಿತ್ತಾಯರು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಲಿದ್ದು , ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಅರ್ಚಕರಾದ ವೇದಮೂರ್ತಿ ಶ್ರೀ ಲಕ್ಷ್ಮೀನಾರಾಯಣ ಆಸ್ರಣ್ಣರು ಇವರ ಶುಭಹಾರೈಕೆಯೊಂದಿಗೆ, ಪುನರೂರು ಪ್ರತಿಷ್ಠಾನ (ರಿ.) ಇದರ ಗೌರವಾಧ್ಯಕ್ಷರಾದ ಧರ್ಮದರ್ಶಿ ಡಾ| ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಲಿದ್ದು, ಇವರೊಂದಿಗೆ ಇತರ ಗೌರವಾನ್ವಿತ ಅತಿಥಿಗಳು ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದ ನಂತರ ಬೃಹತ್ ವರ್ಣರಂಜಿತ ವೇದಿಕೆಯಲ್ಲಿ ಮೈಮನಸೂರೆಗೊಳ್ಳುವ ಗುರು ವಿದ್ಯಾಶ್ರೀ ರಾಧಾಕೃಷ್ಣ ನಿರ್ದೇಶನದಲ್ಲಿ ಗಾನ ನೃತ್ಯ ಅಕಾಡೆಮಿ, ಮಂಗಳೂರು ಪ್ರಸ್ತುತಪಡಿಸುವ ”ನೃತ್ಯ ಸಂಗಮ ಹಾಗೂ ನೃತ್ಯ ರೂಪಕ” ನಡೆಯಲಿದೆ.

LEAVE A REPLY

Please enter your comment!
Please enter your name here