40 ವರ್ಷಗಳ ಕ್ರೀಡಾ ಸಾಧನೆ ಮಾದರಿ: ಪ್ರಶಾಂತ ಶೆಟ್ಟಿ
ಬಂಟ್ವಾಳ: ಕಳೆದ 40 ವರ್ಷಗಳಿಂದ ಗ್ರಾಮೀಣ ಕ್ರೀಡಾಸಕ್ತರಿಗೆ ಪ್ರೋತ್ಸಾಹ ನೀಡುತ್ತಾ ನಿರಂತರವಾಗಿ ಕಬಡ್ಡಿ ಪಂದ್ಯಾಟ ಆಯೋಜಿಸುವುದರ ಜೊತೆಗೆ ಅಪಾರ ಮಂದಿ ಕ್ರೀಡಾ ಸಾಧಕರನ್ನು ಸಮಾಜಕ್ಕೆ ಕೊಡುಗೆ ನೀಡುತ್ತಿರುವ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಶ್ರಮ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಜಿಲ್ಲಾ ಅಡಿಕೆ ಮತ್ತು ಕೃಷಿ ಉತ್ಪನ್ನ ವರ್ತಕರ ಸಂಘದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮೂಡಾಯೂರು ಹೇಳಿದ್ದಾರೆ.
ಇಲ್ಲಿನ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಶನಿವಾರ ಆರಂಭಗೊಂಡ 41ನೇ ವರ್ಷದ ಅಂತರ್ ರಾಜ್ಯ ಮಟ್ಟದ ಪುರುಷರ 55 ಕೆಜಿ ಮತ್ತು 65 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ಲಬ್ಬಿನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದರು.
ಜಿಲ್ಲಾ ಅಮೆಚೂರು ಕಬಡ್ಡಿ ಎಸೋಸಿಯೇಶನ್ ಜೊತೆ ಕಾರ್ಯದಶರ್ಿ ಫ್ರಾನ್ಸಿಸ್ ವಿ.ವಿ., ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಶಾರದಾ, ಮಾಜಿ ಅಧ್ಯಕ್ಷೆ ಹಷರ್ಿಣಿ ಪುಷ್ಪಾನಂದ, ಕಜೆಕಾರು ಗ್ರಾ.ಪಂ.ಅಧ್ಯಕ್ಷ ದೇವದಾಸ್ ಅಬುರ, ವಾಮದಪದವು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಪಿಲಿಂಗಾಲು, ಪಟ್ಲ ಫೌಂಡೇಶನ್ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ಉದ್ಯಮಿ ಅಬ್ದುಲ್ ಶುಕೂರ್ ಕುದ್ರೊಟ್ಟು, ಬೆಳ್ತಂಗಡಿ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದಶರ್ಿ ಪ್ರಶಾಂತ್ ಎಂ.ಪಾರೆಂಕಿ, ಪ್ರಾಂಶುಪಾಲ ಸಂತೋಷ್ ಕುಮಾರ್, ತೀಪರ್ುಗಾರ ಅಬೀಬ್ ಮಾಣಿ ಶುಭ ಹಾರೈಸಿದರು.
ಇದೇ ವೇಳೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸ್ಯಾಕ್ಸೋಫೋನ್ ವಾದಕ ಕೆ.ಬಾಬು ಸಪಲ್ಯ ವಗ್ಗ ಇವರಿಗೆ ‘ಸ್ವಸ್ತಿಕ್ ಸಂಭ್ರಮ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಮುಖರಾದ ಎಎಸೈ ಚಿದಾನಂದ ರೈ, ಫೆಲಿಕ್ಸ್ ಗಾಡಿಯಾರ್, ರಾಜೇಶ್ ಪಿ.ಪುಂಜಾಲಕಟ್ಟೆ, ಜಯರಾಜ್ ಅತ್ತಾಜೆ, ಅಬ್ದುಲ್ ಹಮೀದ್ ಮಲ್ಪೆ, ಮಾಧವ ಬಂಗೇರ, ರಾಜೇಶ್ ಪುಳಿಮಜಲು ಮತ್ತಿತರರು ಇದ್ದರು.
ಪ್ರಭಾಕರ ಪಿ.ಎಂ. ಸ್ವಾಗತಿಸಿ, ಅಬ್ದುಲ್ ಪಿ. ವಂದಿಸಿದರು.
ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗ ಸಹಿತ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ನಡೆಯಿತು.

