ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ 41ನೇ ವರ್ಷಾಚರಣೆ ಪ್ರಯುಕ್ತ 17ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿಯಾಗಿ ಉಚಿತ ಸಾಮೂಹಿಕ ನಿಶ್ಚಿತಾರ್ಥ ಕಾರ್ಯಕ್ರಮ ಶನಿವಾರ ನಡೆಯಿತು. ಕ್ಲಬ್ಬಿನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಅಧ್ಯಕ್ಷ ಪ್ರಶಾಂತ ಪುಂಜಾಲಕಟ್ಟೆ, ನಾಗೇಶ ಪ್ರಭು, ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ, ನವೀನ್ ಬೆಂಜನಪದವು, ಸುಶಾಂತ್ ಕಕರ್ೇರ ಮತ್ತಿತರರು ಇದ್ದರು.