ಬಂಟ್ವಾಳ: ಇಲ್ಲಿನ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ 41ನೇ ವಷರ್ಾಚರಣೆ ಪ್ರಯುಕ್ತ ಮಾ. 16ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಲಿರುವ 17ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪ್ರಯುಕ್ತ ವಧು-ವರರ ನಿಶ್ಚಿತಾರ್ಥ ಕಾರ್ಯಕ್ರಮ ಮಾ.9ರಂದು ನಡೆಯಲಿದೆ.
ಈ ಬಾರಿ ಒಟ್ಟು 8 ಜೋಡಿಗಳಿಗೆ ವಿವಾಹ ನಡೆಯಲಿದ್ದು, ವಧು-ವರರಿಗೆ ಮಂಗಳ ವಸ್ತ್ರ ವಿತರಿಸಲಾಗುವುದು. ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಧ್ಯಕ್ಷ ನಾಗೇಶ್ ಪ್ರಭು ಮತ್ತು ಗುತ್ತಿಗೆದಾರ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಉಪ ತಹಶೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಯರಾಮ ಶೆಟ್ಟಿ ಕಾಪು ಮತ್ತು ಶುಶಾಂತ್ ಕಕರ್ೇರಾ ಮಂಗಳ ವಸ್ತ್ರ ವಿತರಿಸುವರು ಎಂದು ಕ್ಲಬ್ಬಿನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ತಿಳಿಸಿದ್ದಾರೆ.