ಪುತ್ತೂರು : ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ – ಲಿಖಿತಾ ಕೆ ಸಾಧನೆ

0
10

ಪುತ್ತೂರು ತಾಲೂಕಿನ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಒಡ್ಯ ಇಲ್ಲಿನ ವಿದ್ಯಾರ್ಥಿನಿ ಕು. ಲಿಖಿತಾ ಕೆ ಎನ್‌ಎಂಎಂಎಸ್ (National Means-cum-Merit Scholarship) ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾಳೆ.

ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 5274 ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದು, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಜಿಲ್ಲೆ ಮಟ್ಟದಲ್ಲಿ ಮೊದಲ ಸ್ಥಾನ ಗಳಿಸಿರುವುದು ವಿಶೇಷವಾಗಿದೆ.

ಲಿಖಿತಾ ಅವರ ಈ ಸಾಧನೆಗೆ ಶಾಲಾ ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸಿದ್ದಾರೆ. ಪರಿಶ್ರಮ, ಶಿಸ್ತು ಮತ್ತು ಶಿಕ್ಷಕರ ಮಾರ್ಗದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here