Wednesday, January 15, 2025
Homeಉಡುಪಿಜ.5ರಂದು ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಪುತ್ತೂರು ಎಲ್.ವಿ.ಟಿ. ಹಿ.ಪ್ರಾ. ಶಾಲೆಯಲ್ಲಿ ರಕ್ತದಾನ ಶಿಬಿರ

ಜ.5ರಂದು ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಪುತ್ತೂರು ಎಲ್.ವಿ.ಟಿ. ಹಿ.ಪ್ರಾ. ಶಾಲೆಯಲ್ಲಿ ರಕ್ತದಾನ ಶಿಬಿರ

ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ಮಾಜಿ ಪ್ರಧಾನಿ ‘ಭಾರತ ರತ್ನ’ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿಯ ಅಂಗವಾಗಿ ಜ.5 ರವಿವಾರ ಬೆಳಿಗ್ಗೆ ಗಂಟೆ 8.00ರಿಂದ ಮಧ್ಯಾಹ್ನ 12.30ರ ವರೆಗೆ ‘ಬೃಹತ್ ರಕ್ತದಾನ ಶಿಬಿರ’ವು ಪುತ್ತೂರು ಎಲ್.ವಿ.ಟಿ. ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ.

ರಕ್ತದಾನಿಗಳು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು, ಹಿತೈಷಿಗಳು ಮತ್ತು ಸಾರ್ವಜನಿಕ ಬಂಧುಗಳು ಶಿಬಿರಕ್ಕೆ ಆಗಮಿಸಿ ರಕ್ತದಾನವನ್ನು ಮಾಡುವ ಮೂಲಕ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

RELATED ARTICLES
- Advertisment -
Google search engine

Most Popular