ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜು ಇಲ್ಲಿನ ನೂತನ ಪ್ರಾಚಾರ್ಯರಾಗಿ ಸಸ್ಯಶಾಸ್ತ್ರ ವಿಭಾಗದ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ನಿಯುಕ್ತಿಗೊಂಡಿದ್ದಾರೆ. ಇವರು ಮೂಲತಃ ಕಾಸರಗೋಡು ಜಿಲ್ಲೆಯ ಬೆಳ್ಳೂರು ಸಮೀಪದ ಮಿತ್ತಜಾಲಿನವರಾಗಿದ್ದು, ವಿವೇಕಾನಂದ ಕಾಲೇಜಿನಲ್ಲಿ ಕಳೆದ 30 ವರ್ಷಗಳಿಂದ ಉಪನ್ಯಾಸಕರಾಗಿ,ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ, ಉಪಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು.ಎಂಫಿಲ್ ಪದವೀಧರರಾಗಿರುವ ಇವರು ಬಯೋಡೈವರ್ಸಿಟಿ ಆಫ್ ಮೂಕಾಂಬಿಕಾ ವೈಲ್ಡ್ ಲೈಫ್ ಸಾಂಕ್ಚುರಿ ಇನ್ ಕೊಡಚಾದ್ರಿ ಹಿಲ್ಸ್ ಎನ್ನುವ ವಿಷಯದ ಮೇಲೆ ಇಸ್ರೋ ಸಂಸ್ಥೆಯ ನೆರವಿನೊಂದಿಗೆ ಪ್ರಾಣಿಶಾಸ್ತ್ರ ಮತ್ತು ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕರೊಂದಿಗೆ ಜೊತೆಗೂಡಿ ಯೋಜನೆಯನ್ನು ರೂಪಿಸಿದ್ದಾರೆ.ಸಸ್ಯಶಾಸ್ತ್ರ ವಿಭಾಗದಲ್ಲಿ ಅಧ್ಯಯನ ನಿರತರಾದ ನೂರಾರು ವಿದ್ಯಾರ್ಥಿಗಳಿಗೆ ಸಸ್ಯಶಾಸ್ತ್ರ ಕುರಿತು ಅಂತರ್ ರಾಷ್ಟ್ರೀಯ ಹಾಗು ರಾಷ್ಟ್ರ ಮಟ್ಟದ ಪ್ರಬಂಧಗಳನ್ನು ರಚಿಸಿ ಮಂಡನೆಗೆ ಮಾರ್ಗದರ್ಶನ ನೀಡಿರುತ್ತಾರೆ.ಅಲ್ಲದೇ ಕಾಲೇಜಿನ ವಿವಿಧ ಘಟಕಗಳಲ್ಲಿ ಸಂಯೋಜಕರಾಗಿಯೂ ಅತ್ಯುತ್ತಮ ಕಾರ್ಯವನ್ನು ನಡೆಸಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀ ಮುರಳೀಕೃಷ್ಣ ಕೆ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇವರಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು ಮತ್ತು ಸರ್ವ ಪದಾಧಿಕಾರಿಗಳು, ಉಪನ್ಯಾಸಕರು ಮತ್ತು ಉಪನ್ಯಾಸಕೇತರ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Home Uncategorized ಪುತ್ತೂರು : ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ)ಕಾಲೇಜಿನ ನೂತನ ಪ್ರಾಚಾರ್ಯರಾಗಿ ಪ್ರೊ.ಶ್ರೀಕೃಷ್ಣ ಗಣರಾಜ್...

