ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಪುತ್ತೂರು ಕಸಬಾ ಗ್ರಾಮದ ನಿವಾಸಿ ಮೊಹಮ್ಮದ್ ತೌಸೀಫ್(36) ಎಂಬಾತನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ತೌಸೀಫ್ ನಿಷೇಧಿತ ಗಾಂಜಾ ಇರುವುದಾಗಿ ಒಪ್ಪಿಕೊಂಡಿದ್ದಾನೆ. ತಪಾಸಣೆ ನಡೆಸಿದಾಗ 400 ಗ್ರಾಂ. ಗಾಂಜಾ ಪತ್ತೆಯಾಗಿದೆ. ಆರೋಪಿ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಆಕ್ಟ್ 1985 ರಂತೆ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ .

