ಪುತ್ತೂರು: ಇಲ್ಲಿನ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳಿಗೆ ಚೂರಿಯಿಂದ ಇರಿದ ಘಟನೆ ನಡೆದಿದೆ. ಚೂರಿ ಇರಿದ ಹಿಂದೂ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಇಂದು ಮಧ್ಯಾಹ್ನ ನಡೆದಿದ್ದು, ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ತೆರಳಿ ಸಿಸಿಟಿವಿ ಪರಿಶೀಲಿಸಿದ್ದಾರೆ. ಚೂರಿ ಇರಿತದ ಕಾರಣ ತಿಳಿದುಬಂದಿಲ್ಲ. ಪುತ್ತೂರು ನಗರ ಪೊಲೀಸರು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.