ಜೂ.16ರಂದು ಕಾಣಿಯೂರು ಉಳ್ಳಾಕುಲು ಹಾಗೂ ಪರಿವಾರ ದೈವಗಳಿಗೆ ಸಂಬಧಪಟ್ಟಂತೆ ಪ್ರಶ್ನಾಚಿಂತನೆ

0
6

ಕಾಣಿಯೂರು : ಕಾಣಿಯೂರು ಮಠದ ಆಶ್ರಯದಲ್ಲಿ ಉಳ್ಳಾಕುಲು ಹಾಗೂ ಪರಿವಾರ ದೈವಗಳಿಗೆ ಸಂಬಂಧಿಸಿದಂತೆ ನಡೆದ ಪ್ರಶ್ನಾಚಿಂತನೆಯಲ್ಲಿ ಸೂಚಿಸಲಾದ ಪರಿಹಾರ ಕಾರ್ಯಗಳ ಕುರಿತು ಚರ್ಚಿಸಲು ಸಮಸ್ತ ಭಕ್ತಾಧಿಗಳ ಸಭೆಯನ್ನು ಕರೆಯಲಾಗಿದೆ.

ಕಳೆದ ಮೇ 1ರಂದು ಕಾಣಿಯೂರು ಮಠಾಧೀಶರಾದ ವಿದ್ಯಾವಲ್ಲಭ ತೀರ್ಥ ಅವರ ಉಪಸ್ಥಿತಿಯಲ್ಲಿ, ಉಳ್ಳಾಕುಲು ಹಾಗೂ ಪರಿವಾರ ದೈವಗಳಿಗೆ ಸಂಬಂಧಿಸಿದ ಪ್ರಶ್ನಾಚಿಂತನೆಯನ್ನು ಶ್ರೀ ವಿಶ್ವಮೂರ್ತಿ ಬಡೆಕ್ಕಿಲ್ಲಾಯ ಅವರು ನಡೆಸಿಕೊಟ್ಟಿದ್ದರು. ಈ ಕಾರ್ಯಕ್ರಮದಲ್ಲಿ ದೈವಗಳ ಪರಿಚಾರಕ ವರ್ಗದವರು ಹಾಗೂ ಕೂಡುಕಟ್ಟಿನ ಭಕ್ತಾದಿಗಳು ಭಾಗವಹಿಸಿದ್ದರು.

ಪ್ರಶ್ನಾಚಿಂತನೆಯಲ್ಲಿ ಕಂಡುಬಂದ ವಿಚಾರಗಳು ಮತ್ತು ಸೂಚಿಸಲಾದ ಪರಿಹಾರ ಕಾರ್ಯಗಳನ್ನು ಶೀಘ್ರವಾಗಿ ಕೈಗೊಳ್ಳುವ ನಿಟ್ಟಿನಲ್ಲಿ ಜೂನ್ 16 ಮಂಗಳವಾರ ಸಂಜೆ 5 ಗಂಟೆಗೆ ಕಾಣಿಯೂರು ಮಠದ ಸಭಾಂಗಣದಲ್ಲಿ ವಿಶೇಷ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಪರಿಹಾರ ಕಾರ್ಯಗಳ ಅನುಷ್ಠಾನ, ಮುಂದಿನ ಕ್ರಮಗಳು ಹಾಗೂ ಭಕ್ತಾದಿಗಳ ಸಹಕಾರದ ಕುರಿತು ಚರ್ಚೆ ನಡೆಯಲಿದ್ದು, ಕೂಡುಕಟ್ಟಿನ ಪ್ರತಿ ಮನೆಯ ಸದಸ್ಯರು ಕಡ್ಡಾಯವಾಗಿ ಭಾಗವಹಿಸುವಂತೆ ಶ್ರೀ ಮಠದ ವತಿಯಿಂದ ಮನವಿ ಮಾಡಲಾಗಿದೆ.

LEAVE A REPLY

Please enter your comment!
Please enter your name here