ರಾ.ಶಿರೂರು ಕಾಯಕಯೋಗಿ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ: ಪ್ರೊ.ಪ್ರವೀಣ್ ಕನ್ಯಾಳ

0
287

ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಇವರು ಕರ್ನಾಟಕ ರಾಜ್ಯ ಅಕ್ಷರದೀಪ ಫೌಂಡೇಶನ್ (ರಿ) ಬೆಂಗಳೂರು ಇದರ ವತಿಯಿಂದ ಕಾಯಕಯೋಗಿ – 2025 ರಾಷ್ಟ್ರ
ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ. ಇದನ್ನು 2025 ಮೇ 4ರಂದು ಧಾರವಾಡದ ಆರ್. ಎನ್. ಶೆಟ್ಟಿ ಕ್ರೀಡಾಂಗಣದ ಸಮೀಪದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನ ಸಭಾಂಗಣದಲ್ಲಿ ನಡೆಯುವ ಸಾಹಿತ್ಯ ಸಮಾವೇಶದಲ್ಲಿ ನೀಡಿ ಗೌರವಿಸಲಾಗುತ್ತದೆ ಎಂದುಶ ಕರ್ನಾಟಕ ರಾಜ್ಯ ಅಕ್ಷರ ದೀಪ ಫೌಂಡೇಶನ್ (ರಿ)ಬೆಂಗಳೂರು ಇದರ ರಾಜ್ಯ ಸಂಚಾಲಕರಾದ ಪ್ರೊ.ಪ್ರವೀಣ್ ಕನ್ಯಾಳ ಮತ್ತು ರಾಜ್ಯ ಪದಾಧಿಕಾರಿಗಳಾದ ಅಧ್ಯಾಪಕ ಶ್ರೀ ಗಣಪತಿ ಭಟ್ ಅವರು ತಿಳಿಸಿರುತ್ತಾರೆ.

ಎಂ. ಎ. ಬಿ. ಎಡ್. ಪದವೀಧರರಾದ ಡಾ.ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜಭಾಷಾ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಗ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ.
1994ರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವರ್ಷ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ, 1995 ರಿಂದ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯಲ್ಲಿ ಕನ್ನಡ ಆಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿರುವ ಇವರು ಮೂಡುಬಿದಿರೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ
ಇವರಿಂದ ಮೂಡುಬಿದಿರೆಯಲ್ಲಿ ಇನ್ನಷ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ಮುಂದುವರಿಯಲಿ ಎಂದು ಹಾರೈಸಿ ಡಾ.ರಾಮಕೃಷ್ಣ ಶಿರೂರು ಅವರಿಗೆ ಕರ್ನಾಟಕ ರಾಜ್ಯ ಅಕ್ಷರ ದೀಪ ಫೌಂಡೇಶನ್ ಬೆಂಗಳೂರು ಇದರ ರಾಜ್ಯ ಸಂಚಾಲಕ ಪ್ರೊಫೆಸರ್ ಪ್ರವೀಣ್ ಕನ್ಯಾಳ ಮತ್ತು ಅಧ್ಯಾಪಕ ಶ್ರೀ ಗಣಪತಿ ಭಟ್ ಅವರು ಅಭಿನಂದನೆ ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here