Saturday, June 14, 2025
HomeUncategorizedರಾ.ಶಿರೂರು ಸ್ವರ್ಣ ಸಿರಿ ರಾಜ್ಯ ಪ್ರಶಸ್ತಿಗೆ ಆಯ್ಕೆ: ರಾಜೇಂದ್ರ ಪಾಟೀಲ್

ರಾ.ಶಿರೂರು ಸ್ವರ್ಣ ಸಿರಿ ರಾಜ್ಯ ಪ್ರಶಸ್ತಿಗೆ ಆಯ್ಕೆ: ರಾಜೇಂದ್ರ ಪಾಟೀಲ್

ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರಿಗೆ ಹುಬ್ಬಳ್ಳಿಯ ಉಮಾಶಂಕರ ಪ್ರತಿಷ್ಠಾನದ ವತಿಯಿಂದ ಸ್ವರ್ಣ ಸಿರಿ – 2025 ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇದನ್ನು ಮೇ 11ರಂದು ಹುಬ್ಬಳ್ಳಿಯ ಮಹಾರಾಷ್ಟ್ರ ಮಂಡಳ ಸಭಾಂಗಣದಲ್ಲಿ ನಡೆಯುವ ಸಾಹಿತ್ಯ ಸಮಾವೇಶದಲ್ಲಿ ನೀಡಿ ಗೌರವಿಸಲಾಗುತ್ತದೆ ಎಂದು ಶ್ರೀ ಉಮಾಶಂಕರ ಪ್ರತಿಷ್ಠಾನದ ಸಂಚಾಲಕರಾದ ಶ್ರೀ ರಾಜೇಂದ್ರ ಪಾಟೀಲ್ ತಿಳಿಸಿರುತ್ತಾರೆ.

ಎಂ. ಎ. ಬಿ. ಎಡ್. ಪದವೀಧರರಾದ ಡಾ.ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜಭಾಷಾ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಗ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ.
1994ರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವರ್ಷ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ,
1995 ರಿಂದ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯಲ್ಲಿ ಕನ್ನಡ ಆಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿರುವ ಇವರು ಮೂಡುಬಿದಿರೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ
ಇವರಿಂದ ಮೂಡುಬಿದಿರೆಯಲ್ಲಿ ಇನ್ನಷ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ಮುಂದುವರಿಯಲಿ ಎಂದು ಹಾರೈಸಿ ಡಾ.ರಾಮಕೃಷ್ಣ ಶಿರೂರು ಅವರಿಗೆ ಶ್ರೀ ರಾಜೇಂದ್ರ ಪಾಟೀಲ್ ಅವರು ಅಭಿನಂದನೆ ಸಲ್ಲಿಸಿರುತ್ತಾರೆ.

RELATED ARTICLES
- Advertisment -
Google search engine

Most Popular