ಉಡುಪಿ: ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಹಯೋಗದಲ್ಲಿ ಆರೋಗ್ಯ ದರ್ಶನ ಕಾರ್ಯಕ್ರಮವು ಇಂದು ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ.

ಈ ಕಾರ್ಯಕ್ರಮದಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ವಿಕಿರಣದ ಪಾತ್ರ ದ ಕುರಿತು ಮಣಿಪಾಲ್ ಮಾಹೆಯ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಮತ್ತು ಕಸ್ತೂರ್ಬಾ ಹಾಸ್ಪಿಟಲ್ ನ ರೇಡಿಯೊ ಥೆರಪಿ ಮತ್ತು ಓಂಕಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಉಮೇಶ್ ವೇಲು ಮಾಹಿತಿ ನೀಡಲಿದ್ದಾರೆ. ಸೆಪ್ಟೆಂಬರ್ 22 ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.