ಚೆನ್ನೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರನ್ನು ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ನೀಲಗಿರೀಸ್ ನಲ್ಲಿ ಹೆಲಿಕಾಪ್ಟರ್ ಇಳಿದಾಗ ತಪಾಸಣಾಧಿಕಾರಿಗಳು ಹೆಲಿಕಾಪ್ಟರನ್ನು ತಪಾಸಣೆ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಇಲ್ಲಿಂದ ತೆರಳುವವರಿದ್ದರು. ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಬಾರಿ ಕ್ಷೇತ್ರವನ್ನು ಪ್ರತಿನಿಧಿಸಲು ರಾಹುಲ್ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಏ 26ರಂದು ವಯನಾಡ್ ನಲ್ಲಿ ಮತದಾನ ನಡೆಯಲಿದೆ.