ಬಂಟ್ವಾಳ: ಇಲ್ಲಿನ ರಾಯಿ ನಮ್ಮ ಜವನೆರ್ ಸೇವಾ ಟ್ರಸ್ಟ್ ವತಿಯಿಂದ ಇದೇ 19ರಂದು ಬೆಳಿಗ್ಗೆ 9 ಗಂಟೆಗೆ ಬೃಹತ್ ರಕ್ತದಾನ ಮತ್ತು ಆರೋಗ್ಯ ಮಾಹಿತಿ ಶಿಬಿರ ಹಾಗೂ ಅಂಚೆ ಜನಸಂಪರ್ಕ ಅಭಿಯಾನ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಸಮಗ್ರ ರಕ್ಷಣಾ ಯೋಜನೆ (ಅಪಘಾತ ವಿಮೆ) ಬಗ್ಗೆ ಮಾಹಿತಿ ನೀಡಲಾಗುವುದು. ಸಂಜೆ 6 ಗಂಟೆಗೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, 7 ಗಂಟೆಗೆ ಸಭಾ ಕಾರ್ಯಕ್ರಮ ಮತ್ತು 8 ಗಂಟೆಗೆ ವಿಜಯಕುಮಾರ್ ಕೊಡಿಯಾಲ್ ಬೈಲ್ ಇವರ ತಂಡದಿಂದ ‘ಮೈತಿದಿ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಸಮಿತ್ ರಾಯಿ ತಿಳಿಸಿದ್ದಾರೆ.