Saturday, July 20, 2024
Homeಆರೋಗ್ಯರಾಯಚೂರು: ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

ರಾಯಚೂರು: ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

ರಾಯಚೂರು : ಅರೆಬೆಂದ ಊಟ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಸಿಂಧನೂರಿನಲ್ಲಿರುವ ಅಂಬೇಡ್ಕರ್ ವಸತಿ ನಿಲಯದಲ್ಲಿ ನಡೆದಿದೆ. ವಿದ್ಯಾರ್ಥಿನಿಯರು ನಿನ್ನೆ (ಏ.26) ರಂದು ಮಧ್ಯಾಹ್ನ ಊಟ ಸೇವಿಸಿ ಅಸ್ವಸ್ಥರಾಗಿದ್ದಾರೆ. ಕೂಡಲೆ ವಿದ್ಯಾರ್ಥಿನಿಯರನ್ನು ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ವಿದ್ಯಾರ್ಥಿನಿಯರು 2 ಗಂಟೆ ಕಾಲ ನರಳಾಡಿದ್ದಾರೆ. ಆಸ್ಪತ್ರೆಗೆ ಸಮಾಜ ಕಲ್ಯಾಣ ಉಪನಿರ್ದೇಶಕ ಮಹೇಶ್ ಪೊತೆದಾರ್ ಭೇಟಿ ನೀಡಿದ್ದಾರೆ. ವಸತಿ ನಿಲಯದಲ್ಲಿನ ಊಟದ ಸಮಸ್ಯೆ ಬಗ್ಗೆ ಈ ಹಿಂದೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಪ್ರಯೋಜನವಾಗಿಲ್ಲ.

RELATED ARTICLES
- Advertisment -
Google search engine

Most Popular