ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ವಾರಗಳಿಂದ ತೀವ್ರ ಬಿಸಿಲು ಜನರನ್ನು ಕಂಗೆಡಿಸುತ್ತಿರುವ ನಡುವೆಯೂ, ಇಂದು ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ಕೊಪ್ಪಳ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆ ಇದೆ.
ಇನ್ನು ಕೊಡಗು, ಹಾಸನ, ಮೈಸೂರು, ಮಂಡ್ಯ, ಬೆಂಗಳೂರು, ಚಾಮರಾಜನಗರ, ರಾಮನಗರ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.
ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಮುಂದುವರಿಯಲಿದೆ. ವಿಶೇಷವಾಗಿ ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ನಿರೀಕ್ಷೆಯಿದೆ.
ಇಂದು ರಾಜ್ಯದ ಸರಾಸರಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಠ ತಾಪಮಾನ ಸುಮಾರು 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಒಟ್ಟಿನಲ್ಲಿ, ಉರಿಬಿಸಿಲಿನ ನಡುವೆ ಕೆಲ ಜಿಲ್ಲೆಗಳಲ್ಲಿ ಮಳೆ ಜನರಿಗೆ ಸ್ವಲ್ಪ ತಂಪು ನೀಡುವ ಸಾಧ್ಯತೆ ಇದೆ.

