ಕಟೀಲು:ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ರಾಜ್ಯಸಭಾ ಸದಸ್ಯ ಹಾಗೂ ಚಿತ್ರನಟ ಜಗ್ಗೇಶ್ ಅವರು ಶನಿವಾರ ಸಂಜೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭ ಅವರನ್ನು ದೇವಸ್ಥಾನದ ಅನುವಂಶಿಕ ಅರ್ಚಕರಾದ ವೇದಮೂರ್ತಿ ಲಕ್ಷ್ಮೀನಾರಾಯಣ ಆಸ್ರಣ್ಣ ಅವರು ಶ್ರೀ ದೇವರ ಪ್ರಸಾದ ಹಾಗೂ ದೇವಿಯ ಶೇಷವಸ್ತ್ರ ನೀಡಿ ಗೌರವಿಸಿದರು.ಈ ಸಂದರ್ಭ ದೇವಳದ ಅರ್ಚಕ ಹರಿನಾರಾಯಣ ದಾಸ ಆಸ್ರಣ್ಣ, ಅರ್ಚಕವೃಂದ,ಸಿಬ್ಬಂದಿಗಳು ಹಾಜರಿದ್ದರು.