ಬೆಳ್ತಂಗಡಿ: ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಎಸಗಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆಗ್ರಹಿಸಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸತ್ಯಾಂಶ ತಿಳಿಯಲಿದೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಈಗಾಗಲೇ ಗೃಹ ಸಚಿವರು ಹೇಳಿದ್ದಾರೆ. ಪ್ರತಿಭಟನೆಯ ನೆಪದಲ್ಲಿ ಠಾಣೆಗೆ ನುಗ್ಗುವ ಪ್ರಯತ್ನ, ಪೊಲೀಸರ ಮೇಲೆ ದಾಳಿ ನಡೆಸುವಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.