ರಾಮ ಸಾಗರ ಗಾಮಿನೀ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನಂ ಉಪನ್ಯಾಸ

0
191

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ, ಕನ್ನಡ ಸಂಘ ಕಾಂತಾವರ ,ಅಲ್ಲಮ ಪ್ರಭು ಪೀಠ ಕಾಂತಾವರ ಇವುಗಳ ಜಂಟಿ ಆಶ್ರಯದಲ್ಲಿ ವರ್ಷದ ಸರಣಿ ಕಾರ್ಯಕ್ರಮ ರಾಮ ಸಾಗರ ಗಾಮಿನೀ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನಂ ಉಪನ್ಯಾಸ ಮಾಲಾ ಪ್ರವಚನ ಕಾರ್ಕಳ ಹೋಟೆಲ್ ಪ್ರಕಾಶ್ ಸಂಭ್ರಮ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಇದರ ರಾಜ್ಯಾಧ್ಯಕ್ಷ ಸಾಹಿತಿ ಡಾ ನಾ ಮೊಗಸಾಲೆ ಇವರು ವಹಿಸಿದ್ದರು. ರಾಮ ಪಟ್ಟಾಭಿಷೇಕದ ಕುರಿತು ವಿಶೇಷ ಉಪನ್ಯಾಸವನ್ನು ವಿದ್ವಾನ್ ಡಾ ರಾಘವೇಂದ್ರ ರಾವ್ ಪಡುಬಿದ್ರಿ ಇವರು ನಡೆಸಿಕೊಟ್ಟರು.
ವೇದಿಕೆಯಲ್ಲಿ ಕಾರ್ಕಳ ಘಟಕದ ಗೌರವಾಧ್ಯಕ್ಷ ಎಸ್ ನಿತ್ಯಾನಂದ ಪೈ ಏರ್ ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ಉಪಸ್ಥಿತರಿದ್ದರು.
ಕು ಶಾರ್ವರಿ ಶಾನುಭೋಗ್ ಪ್ರಾರ್ಥಿಸಿದರು.ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿಯ ಅಧ್ಯಕ್ಷೆ ಪ್ರೊ.ಮಿತ್ರಪ್ರಭಾ ಹೆಗ್ಡೆ ಸ್ವಾಗತಿಸಿದರು. ಸಮಿತಿಯ ಕಾರ್ಯದರ್ಶಿ ಗಣೇಶ್ ಜಾಲ್ಸೂರು ಕಾರ್ಯಕ್ರಮ ನಿರೂಪಿಸಿದರು. ಸದಸ್ಯೆ ಮಾಲತಿ ಜಿ ಪೈ ಧನ್ಯವಾದವಿತ್ತರು. ಕಾರ್ಯಕ್ರಮದ ಪ್ರಾಯೋಜಕರಾಗಿ ನಿವೃತ್ತ ಶಿಕ್ಷಕಿ ಹರಿಣಿ ಸದಾನಂದ ಕಾಂತಾವರ ಸಹಕರಿಸಿದರು. ಕೊನೆಯಲ್ಲಿ ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಸುಸಂಪನ್ನಗೊಂಡಿತ್ತು.

LEAVE A REPLY

Please enter your comment!
Please enter your name here