ವರದಿ÷ ಮಂದಾರ ರಾಜೇಶ್ ಭಟ್ ತುಳುನಾಡು ವಾರ್ತೆ
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷನಾಗಿ ಜವಾಬ್ದಾರಿ ತೆಗೆದುಕೊಂಡ ಎಂ ರಮೇಶ್ ಶಂಕರಘಟ್ಟ ಇವರು ಮೊದಲ ಬಾರಿಗೆ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಜಗದ್ಗುರು ಡಾ. ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರನ್ನು ಹಾಗೂ ಮಹಾ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಮಹಾ ಸ್ವಾಮೀಜಿಯವರನ್ನು ಈ ದಿನ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು .
ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಸದಸ್ಯರಾದ ಶಶಾಂಕ್, ಕೆಪಿಸಿಸಿ ಸಂಯೋಜಕ ಆರ್ ಮೋಹನ್, ನಂದೀಶ್ ಕುಮಾರ್, ಸಿದ್ದರಾಮು ಪ್ರಸನ್ನ ಮತ್ತಿತರರು ಇದ್ದರು

