ರಾಮೇಶ್ವರಂ ಕೆಫೆ ಬ್ಲಾಸ್ಟ್‌ನ ಶಂಕಿತ ಉಗ್ರನ ರೇಖಾಚಿತ್ರವನ್ನು ಸಿಸಿಬಿ ಪೊಲೀಸರು ಬಿಡುಗಡೆ ಮಾಡಿದ್ದಾರೆ. ನಿನ್ನೆಯಷ್ಟೇ ಶಂಕಿತ ಉಗ್ರನ ಸುಳಿವು ನೀಡಿದರೆ 10ಲಕ್ಷ ನಗದು ಬಹುಮಾನ ಕೊಡುವುದಾಗಿ ಸಿಸಿಟಿವಿ ಫೋಟೋವೊಂದನ್ನು ಎನ್‌ಐಎ ಬಿಡುಗಡೆ ಮಾಡಿತ್ತು. ಖ್ಯಾತ ಸ್ಕೆಚ್ ಆರ್ಟಿಸ್ಟ್‌ನಿಂದ ಬಾಂಬರ್‌ನ ಇಮ್ಯಾಜಿನರಿ ಸ್ಕೆಚ್ ಬಿಡಿಸಲಾಗಿದ್ದು, ಎನ್‌ಐಎ ಬಿಡುಗಡೆ ಮಾಡಿದ ಸಿಸಿಟಿವಿ ಫೋಟೋವನ್ನು ಆಧರಿಸಿ ಮುಖದ ಇಮ್ಯಾಜಿನರಿ ಸ್ಕೆಚ್ ಮಾಡಲಾಗಿದೆ. ಆರ್ಟಿಸ್ಟ್ ಹರ್ಷ ಈ ರೇಖಾಚಿತ್ರವನ್ನು ಬಿಡಿಸಿರುವುದಾಗಿ ವರದಿಯಾಗಿದೆ.