ಕಾಂಗ್ರೆಸ್ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ರಮಿತಾ ಸೂರ್ಯವಂಶಿ

0
22

ಉಡುಪಿ : ಕರಾವಳಿ ಜಿಲ್ಲೆಯಲ್ಲಿ ರಾಜಕೀಯ ಸಂಘರ್ಷ ಮತ್ತೆ ಮುನ್ನೆಲೆಗೆ ಬಂದಿದ್ದು, ಇತ್ತೀಚೆಗೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಧರಣಿ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ ಎಂಬ ಆರೋಪಗಳು ಕೇಳಿಬಂದಿವೆ. ಪ್ರತಿಭಟನೆಯ ನೆಪದಲ್ಲಿ ವಿಪಕ್ಷಗಳು ವಿಕೃತ ಮನಸ್ಥಿತಿ ಪ್ರದರ್ಶಿಸುತ್ತಿವೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಶಾಸಕ ಯಶ್‌ಪಾಲ್ ಸುವರ್ಣ ಅವರ ಛಾಯಾಚಿತ್ರ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್.ಎಸ್.ಎಸ್) ಸಾಂಪ್ರದಾಯಿಕ ಸಮವಸ್ತ್ರ ಹೊಂದಿದ್ದ ಪೂತ್ಥಳಿಗೆ ಬಿಜೆಪಿಯ ಚಿಹ್ನೆ ಲಗತ್ತಿಸಿ ಬೆಂಕಿ ಹಚ್ಚಿರುವ ಘಟನೆಯನ್ನು ಸಾರ್ವಜನಿಕ ಕ್ಷೇತ್ರಗಳಲ್ಲಿ ಕಟುವಾಗಿ ಖಂಡಿಸಲಾಗುತ್ತಿದೆ. ಈ ರೀತಿಯ ಕೃತ್ಯಗಳು ಕೇವಲ ರಾಜಕೀಯ ವಿರೋಧವಾಗಿರದೆ, ಸಾಂಸ್ಕೃತಿಕ ಮೌಲ್ಯಗಳಿಗೆ ಎಸಗಿದ ಅಪಚಾರವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಆರ್.ಎಸ್.ಎಸ್ ಎನ್ನುವುದು ಭಾರತೀಯ ಸಂಸ್ಕೃತಿ ಮತ್ತು ದೇಶಪ್ರೇಮವನ್ನು ಜಗತ್ತಿನಾದ್ಯಂತ ಪಸರಿಸುತ್ತಿರುವ ಶ್ರೇಷ್ಠ ಸಂಘಟನೆಯಾಗಿದೆ. ಅಧಿಕಾರದ ಆಸೆಗೆ ಬಿದ್ದು ಇಂತಹ ಕೃತ್ಯ ಎಸಗಿರುವುದು ಪ್ರತಿಯೊಬ್ಬ ಹಿಂದೂ ಭಾವನೆಗೆ ಧಕ್ಕೆ ತಂದಿದೆ. ಈ ಘಟನೆಗೆ ಕಾರಣರಾದವರ ವಿರುದ್ಧ ಪೊಲೀಸ್ ಇಲಾಖೆ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.